ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರ ತಂದೆಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಪತ್ನಿ ಹಾಗೂ ಮಗಳಿಗೂ ಕೊರೊನಾ ಇರುವುದು ದೃಢವಾಗಿದೆ.ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.— Dr Sudhakar K (@mla_sudhakar) June 23, 2020ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡು ಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ.My father's COVID19 test has come out positive. Anxiously waiting for reports of other family members. Praying for speedy recovery of my father.— Dr Sudhakar K (@mla_sudhakar) June 22, 2020ನಿನ್ನೆ ತಂದೆಗೆ ಕೊರೊನಾ ದೃಢಪಟಿದ್ದು, ಈ ವಿಚಾರವನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದರು. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಬರೆದುಕೊಂಡಿದ್ದರು.ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅವರೂ ಬೇಗ ಗುಣಮುಖರಾಗಲಿ ಎಂದು ನಮ್ಮ ಪ್ರಾರ್ಥನೆ.— Dr Sudhakar K (@mla_sudhakar) June 22, 2020ಇದಕ್ಕೂ ಮೊದಲು, ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಟ್ವೀಟ್ ಮಾಡಿದ್ದರು.ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ.— Dr Sudhakar K (@mla_sudhakar) June 22, 2020Sign in to your account
Username or Email Address


Password

 Remember Me


