ರಾಯಚೂರು: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಜನರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಬಳಿ ನಡೆದಿದೆ.ಮೃತರನ್ನ ಶಿರಸಿ ಮೂಲದ ಮೆಹನಾಜ್ (28) ಮತ್ತು ಇಸ್ಮಾಯಿಲ್ ಸಾಬ್(70) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಎಂಟು ಜನರನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರು ಸೇರಿದಂತೆ ಎಲ್ಲರೂ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಶಿರಸಿಯಿಂದ ರಾಯಚೂರಿಗೆ ತೆರಳುತ್ತಿದ್ದರು. ಈ ವೇಳೆ ಮಣ್ಣಿಕೇರಿ ಬಳಿ ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಮೆಹನಾಜ್ ಮತ್ತು ಇಸ್ಮಾಯಿಲ್ ಸಾಬ್ ಮೃತಪಟ್ಟಿದ್ದಾರೆ.ಬಳಗಾನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಎರಡು ಕುಟುಂಬದವರು ಪ್ರಯಾಣಿಸುತ್ತಿದ್ದು, ಮೃತರು ಒಂದೇ ಕುಟುಂಬದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಾಯಿಯೊಂದು ರಸ್ತೆಯಲ್ಲಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.Sign in to your account
Username or Email Address


Password

 Remember Me


