ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.ಸ್ಯಾಡ್‍ಲೈಟ್ ಫೋನನ್ನು ನಕ್ಸಲೀಯರು ಬಳಸಿದ್ದಾರಾ ಅಥವಾ ಸಮಾಜಘಾತುಕ ಶಕ್ತಿಗಳು ಬಳಸಿವೆಯಾ ಎಂಬುದರ ಬಗ್ಗೆ ಕೇಂದ್ರ ಆಂತರಿಕ ಭದ್ರತಾ ಪಡೆ, ನಕ್ಸಲ್ ನಿಗ್ರಹ ದಳ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಗಳಿಂದ ತೀವ್ರ ನಿಗಾವಹಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಮಹದೇಶ್ವರ ಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಖಚಿತಪಡಿಸಿದ್ದಾರೆ. ಕೆಲವು ಕಡೆ ಸ್ಯಾಟ್‍ಲೈಟ್ ಫೋನ್ ಬಳಸಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.ಒಮ್ಮೊಮ್ಮೆ ವಿದೇಶಿ ಪ್ರಯಾಣಿಕರು ಬಳಸಿರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಯಾರು ಬಳಕೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಮುಂದಿನ ಕ್ರಮ ವಹಿಸಿವುದಾಗಿ ಎಸ್‍ಪಿ ತಿಳಿಸಿದ್ದಾರೆSign in to your account
Username or Email Address


Password

 Remember Me


