ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಯುವತಿಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿದೆ.ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಯುವತಿಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಯುವತಿಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ.ಯುವತಿ ಶೌಚಾಲಯದ ಹೋಗುತ್ತಿದ್ದಂತೆ ಹಿಂದಿನಿಂದ ಬಂದ ಜೈಶಂಕರ್ ಬಾಗಿಲು ಹಾಕಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ವಿರೋಧಿಸುತ್ತಿದ್ದಂತೆ ಹೊರ ಬಂದಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕ, ಯುವತಿ ರೂಂಗೆ ಹೋಗುತ್ತಿದ್ದಂತೆ ಆಕೆಯ ಕೊಠಡಿಯಲ್ಲಿದ್ದ ಮತ್ತೋರ್ವ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಪೊಲೀಸರು ಕಾಮುಕ ಜೈ ಶಂಕರ್ ನನ್ನು ಬಂಧಿಸಿದ್ದಾರೆ. ಸರ್ಕಾರಿ ಕ್ವಾರಂಟೈನ್ ನಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆಯೂ ಪಬ್ಲಿಕ್ ಟಿವಿ ಸರ್ಕಾರಿ ಕ್ವಾರಂಟೈನ್ ನಲ್ಲಿರೋ ಅವ್ಯವಸ್ಥೆಯ ಬಗ್ಗೆ ವರದಿ ಮಾಡಿದೆ.






 Advertisement 




Sign in to your account
Username or Email Address


Password

 Remember Me


