ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಕೊರೊನಾ ನಡುವೆಯೂ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಇದೀಗ ಪ್ರತಿಭಾವಂತ ಖಳನಟ ರಾಜ್ ದೀಪಕ್ ಶೆಟ್ಟಿ ತಮ್ಮ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ದಕ್ಷಿಣ ಭಾರತದ ಹೆಸರಾಂತ ಖಳನಟ ರಾಜ್ ದೀಪಕ್ ಶೆಟ್ಟಿ ತಮ್ಮ ಗೆಳತಿ ಸೋನಿಯಾ ರಾಡ್ರಿಗಸ್ ಜೊತೆ ಎಂಗೇಜ್ ಆಗಿದ್ದಾರೆ. ದೀಪಕ್ ಮದುವೆ ಮೇ 17ಕ್ಕೆ ನಿಗದಿಯಾಗಿತ್ತು. ಆದರೆ ಕೊರೊನಾ ಕಾರಣದಿಂದಾಗಿ ವಿವಾಹ ಸಮಾರಂಭವನ್ನು ಮುಂದೂಡಲಾಗಿತ್ತು. ಇದೀಗ ಜೂನ್‍ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಮಂಗಳೂರಿನಲ್ಲಿ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಇವರ ನಿಶ್ಚಿತಾರ್ಥ ಸಮಾರಂಭ ನೆರವೇರಿದೆ. ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೋಡಿಗೆ ಶುಭ ಹಾರೈಸಿದ್ದಾರೆ.ಸೋನಿಯಾ ರಾಡ್ರಿಗಸ್ ಇವೆಂಟ್ ಆರ್ಗನೈಸರ್ ಆಗಿದ್ದು, ಮಂಗಳೂರು ಫ್ಯಾಷನ್ ವೀಕ್‍ನ ಮಾಲಕಿ ಕೂಡ ಆಗಿದ್ದಾರೆ. ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ಫೇಸ್ ಬುಕ್‍ನಲ್ಲಿ ಸ್ನೇಹಿತರಾಗಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರು ತಮ್ಮ ಪ್ರೀತಿಯ ವಿಚಾರವನ್ನು ಮನೆಯಲ್ಲಿ ಹೇಳಿದ್ದಾರೆ. ಬಳಿಕ ಎರಡು ಮನೆಯವರು ಇವರ ಪ್ರೀತಿಗೆ ಒಪ್ಪಿಗೆ ಸೂಚಿಸಿ ನಿಶ್ಚಿತಾರ್ಥ ಮಾಡಿದ್ದಾರೆ.ಸದ್ಯಕ್ಕೆ ಅಕ್ಟೋಬರ್ ತಿಂಗಳಲ್ಲಿ ಮದುವೆ ಕಾರ್ಯಕ್ರಮವನ್ನು ಇಟ್ಟುಕೊಳ್ಳುವ ಯೋಚನೆ ಮಾಡಿದ್ದಾರೆ. ಅಕ್ಟೋಬರ್ 18 ರಂದು ದೀಪಕ್ ಶೆಟ್ಟಿ ಹುಟ್ಟುಹಬ್ಬ. ಹೀಗಾಗಿ ಅಂದಿನ ದಿನ ಮದುವೆಯಾಗಲಿದ್ದಾರೆ. ಸದ್ಯಕ್ಕೆ ಲಾಕ್‍ಡೌನ್‍ನಿಂದಾಗಿ ಸಿನಿಮಾ ಚಿತ್ರೀಕರಣ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ದೀಪಕ್ ರಾಜ್ ಮಂಗಳೂರಿನ ಸ್ವಗೃಹದಲ್ಲಿ ಕುಟುಂಬದೊಂದಿಗೆ ಕಾಲಕಳೆಯುತ್ತಿದ್ದಾರೆ.ರಾಜ್ ದೀಪಕ್ ಶೆಟ್ಟಿ ‘ಪಂಚತಂತ್ರ’, ‘ಗಡಿಯಾರ’, ‘ಭರ್ಜರಿ’, ‘ಕೋಟಿಗೊಬ್ಬ 3’, ಸೇರಿದಂತೆ 30ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ‘ಕೋಟಿಗೊಬ್ಬ-3’ ಸೇರಿದಂತೆ ದೀಪಕ್ ನಟನೆಯ ಕೆಲ ಸಿನಿಮಾಗಳೂ ರಿಲೀಸ್ ಆಗಬೇಕಿದೆ. ಈಗ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾಗೆ ಆಯ್ಕೆ ಆಗಿದ್ದಾರೆ.Sign in to your account
Username or Email Address


Password

 Remember Me


