ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಈ ವರೆಗೆ ಚೀನಾ ಮಹಾಮಾರಿಗೆ 43 ಜನ ಸಾವನ್ನಪ್ಪಿದ್ದಾರೆ.ನಗರದ ಚಿಕ್ಕಪೇಟೆಯ ಜೈನ್‍ಟೆಂಪಲ್‍ನಲ್ಲಿ ಅಕೌಂಟಿಂಗ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ 54 ವರ್ಷದ ಸೋಂಕಿತ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಮೂರ್ನಾಲ್ಕು ಆಸ್ಪತ್ರೆಗಳಿಗೆ ಸುತ್ತಾಡಿದ್ದ ಸೋಂಕಿತ, ನಂತರ ಬೌರಿಂಗ್ ಆಸ್ಪತ್ರೆಗೆ ಕೋವಿಡ್-19 ಟೆಸ್ಟ್ ಗೆ ಬಂದಿದ್ದರು. ನಂತರ ಬೌರಿಂಗ್ ನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು.ಕಳೆದ ನಾಲ್ಕು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಆಗಿದ್ದು, ಎರಡು ದಿನಗಳ ಹಿಂದೆ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಬುಧವಾರ ರಾತ್ರಿ ವರದಿ ಬಂದಿದ್ದು, ಪಾಸಿಟಿವ್ ಎಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ವರದಿ ಪಾಸಿಟಿವ್ ಬರುತ್ತಿದ್ದಂತೆ ಸೋಂಕಿತನ ಸಂಪರ್ಕದಲ್ಲಿದ್ದ 10 ಜನರನ್ನು ಬುಧವಾರ ರಾತ್ರಿಯೇ ಕ್ವಾರಂಟೈನ್ ಮಾಡಲಾಗಿದೆ. ಮಹಾಮಾರಿ ಕೊರೊನಾ ರೌದ್ರ ನರ್ತನ ಮೆರೆಯುತ್ತಿದ್ದು, ಬೆಂಗಳೂರಿನಲ್ಲೇ 43 ಜನ ಸಾವನ್ನಪ್ಪಿದ್ದಾರೆ.Sign in to your account
Username or Email Address


Password

 Remember Me


