ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 114 ಮಿಲಿ ಮೀಟರ್ ಮಳೆ ದಾಖಲಾಗಿದೆ.ಜಿಲ್ಲೆಯಲ್ಲಿ 114 ಮಿಲಿ ಮೀಟರ್ ಸರಾಸರಿ ಮಳೆ ದಾಖಲಾಗಿದ್ದು, ಉಡುಪಿ ನಗರ ಮತ್ತು ತಾಲೂಕಿನಲ್ಲಿ 121 ಮಿ.ಮೀ, ಕುಂದಾಪುರದಲ್ಲಿ 120 ಮಿ.ಮೀ ಮಳೆ ಬಿದ್ದಿದೆ. ಕಾರ್ಕಳ ತಾಲೂಕಿನಲ್ಲಿ 100 ಮಿಲಿ ಮೀಟರ್ ಮಳೆ ಸುರಿದಿದೆ. ಉಡುಪಿ ಜಿಲ್ಲಾಡಳಿತದಿಂದ ಮಳೆ ಮಾಹಿತಿ ಲಭ್ಯವಾಗಿದ್ದು, ಮುಂದಿನ 24 ಗಂಟೆಗಳ ಕಾಲ ಗುಡುಗು ಮಳೆ ಮುಂದುವರೆಯುವ ಸಾಧ್ಯತೆ ಇದೆ.ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು, ರಾತ್ರಿಪೂರ್ತಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾರಾಂತ್ಯದವರೆಗೆ ಭಾರೀ ಮಳೆ ಸಾಧ್ಯತೆಯಿದ್ದು, ಜಿಲ್ಲೆಯಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ನದಿ ಸಮುದ್ರ ತೀರದ ಜನಕ್ಕೆ ಎಚ್ಚರಿಕೆ ರವಾನೆ ಮಾಡಲಾಗಿದೆ.ಜಿಲ್ಲೆಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಕಾಪು ತಾಲೂಕಲ್ಲಿ ಮೂರು ಮನೆಗಳ ಹಂಚು ಹಾರಿಹೋಗಿದ್ದು, ತಲಾ ಏಳು ಸಾವಿರ ರುಪಾಯಿಯಷ್ಟು ನಷ್ಟವಾಗಿದೆ ಎಂದು ಮನೆ ಮಾಲೀಕರಾದ ಭಾಸ್ಕರ್, ಲಿಲಾತಾ, ಬೇಬಿ ಅವರು ಪಂಚಾಯತ್‍ಗೆ ದೂರಿದ್ದಾರೆ. ಎರ್ಲಪಾಡಿ ವ್ಯಾಪ್ತಿಯ ವಿಶ್ವನಾಥ ಎಂಬವರ ಮನೆ ಮೇಲೆ ಮರ ಬಿದ್ದಿದ್ದು ಸುಮಾರು 10 ಸಾವಿರ ರುಪಾಯಿ ನಷ್ಟವಾಗಿದೆ.Sign in to your account
Username or Email Address


Password

 Remember Me


