ಮಂಗಳೂರು: ಅಣ್ಣ- ತಂಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ನೀಲಯ್ಯ ಶೆಟ್ಟಿಗಾರ್(42) ಹಾಗೂ ತಂಗಿ ಕೇಸರಿ(39) ಮೃತಪಟ್ಟವರು. ಇಬ್ಬರೂ ಅವಿವಾಹಿತರಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಕೂಡಲೇ ಬಂದು ಬೆಂಕಿ ನಂದಿಸಿದರೂ ಅಣ್ಣ-ತಂಗಿ ಇಬ್ಬರೂ ಮೃತಪಟ್ಟಿದ್ದರು.ಕೇಸರಿ 30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ. ಕೆಲ ತಿಂಗಳ ಹಿಂದೆ ಇವರ ತಂದೆ ಹಾಗೂ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


