ಚಾಮರಾಜನಗರ: ಮದುವೆಗೆ ತೆರಳಿದವರು ಮಸಣಕ್ಕೆ ಸೇರಿದ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೊರಮನಕತ್ತರಿ ಜೆ ವಿಲೇಜ್ ಬಳಿ ನಡೆದಿದೆ.ಹನೂರು ತಾಲೂಕಿನ ಹುಣಸೇಪಾಳ್ಯ ಗ್ರಾಮದ ನಿವಾಸಿಗಳಾದ ಚಿಕ್ಕಸಿದ್ದಮ್ಮ, ನಂಜುಂಡಯ್ಯ ಹಾಗೂ ನಾಗ ಸ್ಥಳದಲ್ಲೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಗೆ ಮದುವೆಗೆಂದು ತೆರಳಿದವರು ಮದುವೆ ಮುಗಿಸಿಕೊಂಡು ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ.ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಬೊಲೆರೋ ವಾಹನದಲ್ಲಿ ಜನ ಸಾಗಣೆ ಮಾಡಬಾರದೆಂದು ನಿಯಮವಿದೆ. ಆದರೂ ಕೂಡ ಬೊಲೆರೋ ಪಿಕಪ್ ವಾಹನದಲ್ಲಿ ತೆರಳಿ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


