ಚಿಕ್ಕೋಡಿ: ವಿಧಾನ ಪರಿಷತ್ ಟಿಕೆಟ್‍ಗಾಗಿ ಬಿಜೆಪಿಯಲ್ಲಿ ಯಾವುದೇ ಪೈಪೋಟಿ ಇಲ್ಲ. ಪಕ್ಷದ ಹೈ ಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಬಿಜೆಪಿಯ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಹೈ ಕಮಾಂಡ್ ಹೇಳಿದವರಿಗೆ ನಾವು ವೋಟ್ ಹಾಕುತ್ತೇವೆ. ವಿಧಾನ ಪರಿಷತ್ ಚುನಾವಣಾ ಟಿಕೆಟಿಗಾಗಿ ಪೈಪೋಟಿ ನಡೆಸಿಲ್ಲ. ಸಹೋದರನಿಗೆ ರಾಜ್ಯ ಸಭಾ ಟಿಕೆಟ್ ಕೇಳಿದ್ದೆವು. ಆದರೆ ಹೈ ಕಮಾಂಡ್ ಒಳ್ಳೆಯ ಕಾರ್ಯಕರ್ತರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಿದೆ. ರಮೇಶ್ ಕತ್ತಿಗೆ ಲೋಕಸಭಾ ಟಿಕೆಟ್ ಸಿಕ್ಕರೆ ಸರಿ, ಇಲ್ಲವಾದಲ್ಲಿ ರಾಜ್ಯ ಸಭೆಗೆ ಪ್ರಯತ್ನ ಮಾಡುತ್ತೇವೆ. ವಿಧಾನ ಪರಿಷತ್‍ಗೆ ರಮೇಶ್ ಕತ್ತಿ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಆನ್‍ಲೈನ್ ಶಿಕ್ಷಣ ರದ್ದು ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. 7ನೇ ತರಗತಿ ವರೆಗಿನ ವಿದ್ಯಾರ್ಥಿಗಳ ಪಾಲಕರು ಯಾರೂ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ನೀಡಬೇಡಿ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಪಾಲಕರಲ್ಲಿ ವಿನಂತಿಸಿದ್ದಾರೆ.Sign in to your account
Username or Email Address


Password

 Remember Me


