ಮಂಗಳೂರು: ತಂದೆಯನ್ನೇ ಇಬ್ಬರು ಮಕ್ಕಳು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ.ಇಲ್ಲಿನ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿನ ನಿವಾಸಿ ಧರ್ನಪ್ಪ ಪೂಜಾರಿ (65) ಕೊಲೆಯಾದ ವ್ಯಕ್ತಿ. ಇವರನ್ನು ಮಕ್ಕಳಾದ ಮೋನಪ್ಪ ಹಾಗೂ ನವೀನ್ ಎಂಬವರು ಭಾನುವಾರ ತಡರಾತ್ರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.ಮನೆಯಲ್ಲಿದ್ದ ತೆಂಗಿನ ಮರದ ತೆಂಗಿನಕಾಯಿ, ಸೀಯಾಳವನ್ನು ತೆಗೆದು ತಂದೆ ಮಾರಾಟ ಮಾಡುತ್ತಿದ್ದರು. ಇದೇ ವಿಚಾರಕ್ಕೆ ತಂದೆ ಹಾಗೂ ಮಕ್ಕಳಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.ನಿನ್ನೆ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ-ಮಕ್ಕಳ ಮಧ್ಯೆ ಜಗಳ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಮಕ್ಕಳು ತಂದೆಯನ್ನು ಕತ್ತಿಯಿಂದ ಕಡಿದಿದ್ದಾರೆ. ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಪ್ರಕರಣ ಇಂದು ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


