ಬೆಂಗಳೂರು: ಮಹಾಮಾರಿ ಕೊರೊನಾ, ಲಾಕ್‍ಡೌನ್ ಇದ್ದರೂ ಸ್ಯಾಂಡಲ್‍ವುಡ್‍ನಲ್ಲಿ ಕೆಲ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಸ್ಯಾಂಡಲ್‍ವುಡ್ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಇದನ್ನೂ ಓದಿ: ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿ ಜೊತೆ ವಿನಾಯಕ್ ಜೋಷಿ ಮದ್ವೆನಟಿ ಶುಭಾ ಪೂಂಜಾ ಸುಮಂತ್ ಎಂಬ ಹುಡುಗನ ಕೈ ಹಿಡಿಯುತ್ತಿದ್ದಾರೆ. ಹುಡುಗ ಸುಮಂತ್ ಮಹಾಬಲ ಮಂಗಳೂರು ಮೂಲದವರಾಗಿದ್ದು, ಜಯಕರ್ನಾಟಕ ಬೆಂಗಳೂರು ಸೌತ್ ವಿಂಗ್ ಪ್ರೆಸಿಡೆಂಟ್ ಆಗಿದ್ದಾರೆ. ಅಲ್ಲದೇ ಸುಮಂತ್ ಮಹಾಬಲ ಬಿಸಿನೆಸ್ ಮ್ಯಾನ್ ಕೂಡ ಆಗಿದ್ದಾರೆ.ಸುಮಂತ್ ಮತ್ತು ಶುಭಾ ಪೂಂಜಾ ಇಬ್ಬರು ಪರಸ್ಪರ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ವಿಚಾರವನ್ನು ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ. ಎರಡು ಕುಟುಂಬದರು ಇವರ ಪ್ರೀತಿ ಒಪ್ಪಿಗೆ ಸೂಚಿಸಿದ್ದು, ಇದೇ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದೀಗ ಒಂದು ವರ್ಷದ ಪ್ರೀತಿಗೆ ಅಧಿಕೃತವಾಗಿ ಮದುವೆ ಎಂಬ ಮುದ್ರೆ ಬೀಳುತ್ತಿದೆ.ನಟಿ ಶುಭಾ ಪೂಂಜಾ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಕನ್ನಡದಲ್ಲಿ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಸಿದ್ದಾರೆ. ಶುಭಾ ಪೂಂಜಾ ‘ಜಾಕ್ ಪಾಟ್’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದರು.  ಇದೇ ವರ್ಷ ನಟಿ ಶುಭಾ ಪೂಂಜಾ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


