ಬೆಂಗಳೂರು: 1.16 ಕೆಜಿ ಚಿನ್ನಾಭರಣ ಕದ್ದು ಮಾರಲು ಯತ್ನಿಸಿದ್ದ ಖತರ್ನಾಕ್ ಕಳ್ಳನೊಬ್ಬ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಉತ್ತಮ್ ದೋಲಾಯಿ ಬಂಧಿತ ಆರೋಪಿ. ನಂದಿನಿ ಲೇಔಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಉತ್ತಮ್ ಸಿಕ್ಕಿಬಿದ್ದಿದ್ದು, ಬಂಧಿತನಿಂದ 45 ಲಕ್ಷ ರೂ. ಮೌಲ್ಯದ 1 ಕೆಜಿ 16 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ಉತ್ತಮ್ ದೋಲಾಯಿ ನಂದಿನಿ ಲೇಔಟ್‍ನಲ್ಲಿ ಇದೇ ಜೂನ್ 8ರಂದು ರಾತ್ರಿ ಅನುಮಾನಸ್ಪದವಾಗಿ ಜ್ಯುವೆಲರಿ ಶಾಪ್ ಬಳಿ ಓಡಾಡುತ್ತಿದ್ದ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ವಿಚಾರಿಸಿದಾಗ ಆರೋಪಿಯ ಜೇಬಿನಲ್ಲಿ ಚಿನ್ನಾಭರಣಗಳು ಪತ್ತೆಯಾಗಿದ್ದವು. ಚಿನ್ನ ಸಿಕ್ಕ ಕೂಡಲೇ ಪೊಲೀಸರು ಪ್ರಶ್ನಿಸಿದಾಗ ಉತ್ತಮ್ ತಬ್ಬಿಬ್ಬಾಗಿದ್ದ. ತಕ್ಷಣವೇ ಆರೋಪಿಯನ್ನ ಠಾಣೆಗೆ ಕರೆತಂದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಠಾಣೆಯ ಪೊಲೀಸರು ಆರೋಪಿಯನ್ನ ಸದ್ಯ ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಉತ್ತಮ್ ಬೆಂಗಳೂರಿನ ವಿವಿಧ ಕಡೆ ಕಳ್ಳತನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.Sign in to your account
Username or Email Address


Password

 Remember Me


