ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಯಂತ್ರಕ್ಕೆ ಸಿಗುವಂತೆ ಕಾಣುತ್ತಿಲ್ಲ. ಹೆಮ್ಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಂಗಳೂರಿನ ದಂಪತಿ ಸೋಂಕಿನಿಂದ ಮೃತಪಟ್ಟಿದ್ದಾರೆ.ಮೃತ ವೃದ್ಧೆಗೆ 73 ವರ್ಷ ಹಾಗೂ ಪತಿಗೆ 82 ವರ್ಷ ವಯಸ್ಸು. ಮಹಿಳೆಯು ಬಿಟಿಎಂ ಲೇಔಟ್ ನಿವಾಸಿಯಾಗಿದ್ದರು. ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಹಾಗೂ ಪರೀಕ್ಷೆಗಾಗಿ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು.ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಗೆ ಸೇರುವ ಮುನ್ನವೇ ಮೃತಪಟ್ಟಿದ್ದಾರೆ. ಕೊರೊನಾ ಶಂಕೆ ವ್ಯಕ್ತವಾದ ಹಿನ್ನೆಲೆ ವೃದ್ಧೆಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ರಿಪೋರ್ಟ್ ನಲ್ಲಿ ಕೊರೊನಾ ತಗುಲಿರುವುದು ಖಚಿತವಾಗಿದೆ. ಮಹಿಳೆಯ ಪತಿಗೆ ಇಬ್ಬರು ಪತ್ನಿಯರಿದ್ದಾರೆ. ವೃದ್ಧ ತನ್ನ ಎರಡನೇ ಪತ್ನಿಯ ಜೊತೆಗೆ ಟ್ಯಾನರಿ ರೋಡ್ ಸಮೀಪದಲ್ಲಿ ವಾಸವಿದ್ದ.ವೃದ್ಧೆ ಸಾವಿನ ಬಳಿಕ ಆಕೆಯ ಪತಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಆದರೆ ಗಂಟಲು ದ್ರವ ತೆಗೆದುಕೊಂಡ ಕೆಲವೇ ಕ್ಷಣಗಳಲ್ಲಿ ಹೃದಯಘಾತವಾಗಿ ಆತನೂ ಮೃತಪಟ್ಟಿದ್ದಾರೆ.Sign in to your account
Username or Email Address


Password

 Remember Me


