ಕಲಬುರಗಿ: ನಗರದಲ್ಲಿ ಹಾಡುಹಗಲೇ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ನಡೆದಿದೆ.ಬಸವರಾಜ್ ಆಮ್ಟೆ (23) ದಾಳಿಗೊಳಗಾದ ಯುವಕ. ನಗರದ ಐವಾನ್ ಎ ಶಾಹಿ ಸಕ್ಯೂಟ್ ಹೌಸ್ ಬಳಿ ಕೃತ್ಯ ಎಸಗಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.ಬಸವರಾಜ್ ರೈಲ್ವೆ ಇಲಾಖೆಯಲ್ಲಿ ಹೌಸ್ ಕಿಪಿಂಗ್ ಸೂಪರ್‍ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಬೈಕ್ ಮೇಲೆ ತೆರಳುತ್ತಿರುವಾಗ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಬೆಚ್ಚಿಬಿದ್ದು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಕ್ಷಣವೇ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದ ಬಸವರಾಜ್‍ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.Sign in to your account
Username or Email Address


Password

 Remember Me


