ಹಾಸನ: ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದ್ದು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.ಹಾಸನ ನಗರದ ರಿಂಗ್ ರಸ್ತೆಯಲ್ಲಿ ಉದ್ಧೂರು ಬಳಿ ಮರಳು ಲಾರಿ, ಬೋಲೆರೊ ಹಾಗೂ ಹೊಂಡಾ ಸಿಟಿ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಲಾರಿ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ಲಾರಿಯಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಈ ಭಾಗದಲ್ಲಿ ರಾತ್ರಿ ವೇಳೆ ಹಲವರು ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


