ಬೆಂಗಳೂರು: ಮುಖ್ಯ ಪೇದೆಯೊಬ್ಬರು ರೈಲ್ವೆ ಟ್ರ್ಯಾಕ್ ಬಳಿ ನೇಣಿಗೆ ಶರಣಾದ ಘಟನೆ ಹೆಗ್ಡೆ ನಗರದಲ್ಲಿ ನಡೆದಿದೆ.ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ರವೀಂದ್ರ ಆತ್ಮಹತ್ಯೆಗೆ ಶರಣಾದ ಮುಖ್ಯ ಪೇದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರವೀಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ರವೀಂದ್ರ ಅವರು ಇಂದು ಹೆಗ್ಡೆನಗರದ ರೈಲ್ವೆ ಟ್ರ್ಯಾಕ್ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದೇಹವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದರು. ಬಳಿಕ ಮೃತ ದೇಹದ ಗುರುತು ಪತ್ತೆಹಚ್ಚಿದ್ದರು.ಈ ಸಂಬಂಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.Sign in to your account
Username or Email Address


Password

 Remember Me


