ಬೆಂಗಳೂರು: ಮಹಾರಾಷ್ಟ್ರದಿಂದ ಬಂದವರಿಗೆ ಕೊನೆಗೂ ಹೋಂ ಕ್ವಾರಂಟೈನ್ ರದ್ದು ಮಾಡಲಾಗಿದೆ.ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ಸ್ಫೋಟವಾಗಿದ್ರೂ ಸಾಂಸ್ಥಿಕ ಕ್ವಾರಂಟೈನ್ ರದ್ದು ಮಾಡಿ ಹೋಂ ಕ್ವಾರಂಟೈನ್ ಮಾಡುವ ನಿರ್ಧಾರವನ್ನು ಸಚಿವರು ಪ್ರಕಟಿಸಿದ್ದರು. ಸರ್ಕಾರದ ಈ ನಡೆ ವಿರೋಧಿಸಿ ಪಬ್ಲಿಕ್ ಟಿವಿ ನಿರಂತರ ಸುದ್ದಿ ಪ್ರಸಾರ ಮಾಡಿತ್ತು.ಕೊನೆಗೂ ಪಬ್ಲಿಕ್ ಆಗ್ರಹಕ್ಕೆ ಮಣಿದು ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ಬದಲು 7 ದಿನ ಸಾಂಸ್ಥಿಕ ಕ್ವಾರಂಟೈನ್ ನಿರ್ಧಾರ ಪ್ರಕಟಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು ಇಲ್ಲ. ಬದಲಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.ಐಸಿಎಂಆರ್ ಸೂಚಿತ ಲ್ಯಾಬ್‍ನಲ್ಲಿ ಕೋವಿಡ್ ಟೆಸ್ಟ್ ನೆಗೆಟಿವ್ ಬಂದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಇಲ್ಲ. 2 ದಿನಗಳ ಹಿಂದಿನ ಲ್ಯಾಬ್ ವರದಿ ಇದ್ದಲ್ಲಿ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ರದ್ದು ಮಾಡಲಾಗುವುದು. ಬೇರೆ ರಾಜ್ಯದಿಂದ ಬಂದವರಿಗೆ ಮಾತ್ರ 14 ದಿನ ಹೋಂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ.Sign in to your account
Username or Email Address


Password

 Remember Me


