ಧಾರವಾಡ: ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ತೀರ್ಮಾನ ಅಂತಿಮ. ಪಕ್ಷ ಸಂಘಟನೆಯಲ್ಲಿ ತೊಡಗಿರುವವರನ್ನು ನೋಡಿ ಟಿಕೆಟ್ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಭಾಕರ್ ಕೋರೆ, ರಮೇಶ ಕತ್ತಿ ಅಸಮಾಧಾನವಾಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು. ಕೋರೆ ಮತ್ತು ರಮೇಶ ಕತ್ತಿ ಜೊತೆ ಮಾತನಾಡುತ್ತೇನೆ ಎಂದರು.ರಾಜ್ಯ ಬಿಜೆಪಿಯಿಂದ ಮೂವರ ಹೆಸರನ್ನು ಶಿಫಾರಸು ಮಾಡಿ ಹೈಕಮಾಂಡ್‍ಗೆ ಕಳುಹಿಸಿತ್ತು. ಅಂತಿಮವಾಗಿ ಹೈಕಮಾಂಡ್ ಇಬ್ಬರ ಹೆಸರನ್ನು ಅಂತಿಮಗೊಳಿಸಿದೆ, ಈಗ ಟಿಕೆಟ್ ಸಿಕ್ಕವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಇವರನ್ನು ಗುರುತಿಸಿ ಹೈಕಮಾಂಡ್ ಟಿಕೆಟ್ ನೀಡಿದೆ ಎಂದು ಹೇಳಿದರು.Sign in to your account
Username or Email Address


Password

 Remember Me


