ಬೆಂಗಳೂರು: ಜೂನ್ 19ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪರ್ಧಿಸಲಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ @H_D_Devegowda ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು.— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 8, 2020ಇನ್ನೊಂದು ಟ್ವೀಟ್ ಮಾಡಿ, ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದಿದ್ದಾರೆ.ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ.— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 8, 2020ಕಾಂಗ್ರೆಸ್ಸಿನಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


