ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಡೆಡ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನ 239 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆ ಕಂಡಿದೆ.ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆ ರಾಜ್ಯಕ್ಕೆ ಮರಳಿರುವುದರಿಂದ ಕೋವಿಡ್-19 ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಬರುತ್ತಿದೆ. ಅದರಲ್ಲೂ ಶುಕ್ರವಾರ ದಾಖಲೆಯ 515 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಶನಿವಾರ 378 ಜನರಿಗೆ ಸೋಂಕು ಪತ್ತೆಯಾದರೆ ಇಂದು 239 ಮಂದಿಗೆ ಪತ್ತೆಯಾಗಿದ್ದು, ಸೋಂಕಿತರ ಪ್ರಮಾಣ ಕಡೆಮೆಯಾಗುತ್ತಿದೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಲಬುರಗಿ 39, ಯಾದಗಿರಿ 39, ಬೆಳಗಾವಿ 38, ಬೆಂಗಳೂರು ನಗರ 24, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.ಸಾವು:
ರೋಗಿ-2519: ಬೆಂಗಳೂರಿನ ನಿವಾಸಿ 61 ವರ್ಷದ ವೃದ್ಧೆ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ವೃದ್ಧೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಮಧುಮೇಹ, ರಕ್ತದೊತ್ತಡ, ಹೈಫೋ ಥೈರಾಡಿಸಮ್‍ನಿಂದ ಬಳಲುತ್ತುದ್ದ ಅವರು ಮೇ 29ರಂದು ಬೆಂಗಳೂರಿನ ಕೋವಿಡ್-13 ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಐಸಿಯು, ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ವೃದ್ಧೆ ಜೂನ್ 06ರಂದು ಮೃತಪಟ್ಟಿದ್ದಾರೆ.ರೋಗಿ-4315: ಬೆಂಗಳೂರಿನ ನಿವಾಸಿ 57 ವರ್ಷದ ಪುರುಷ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧುಮೇಹ, ರಕ್ತದೊತ್ತಡ, ಆನೆ ಕಾಲು ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಜೂನ್ 03ರಂದು ಬೆಂಗಳೂರಿನ ಕೋವಿಡ್-13 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ವೃದ್ಧೆ ಜೂನ್ ಇಂದು ಮೃತಪಟ್ಟಿದ್ದಾರೆ.ಡಿಸ್ಜಾರ್ಜ್:
ಕೊರೊನಾ ಮಹಾಮಾರಿಯಿಂದ ಇಂದು ಒಟ್ಟು 143 ಜನರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 2,132ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3,257 ಪ್ರಕರಣಗಳು ಸಕ್ರಿಯಾಗಿವೆ. ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣ ಪೈಕಿ 183 ಪ್ರಕರಣಗಳು ಅಂತರರಾಜ್ಯ ಹಾಗೂ 9 ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯನ್ನು ಹೊಂದಿದೆ. ರಾಜ್ಯದ ವಿವಿಧ ಆಸ್ಪತ್ರೆಯ ತುರ್ತು ನಿಗಾ ಘಟಕಗಳಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಾಜ್ಯದಲ್ಲಿ ಇದುವರೆಗೂ 3,84,442 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಒಟ್ಟು 3,72,399 ಮಾದರಿಗಳು ನೆಗೆಟಿವ್ ಬಂದಿದೆ. 5,452 ಪಾಸಿಟಿವ್ ವರದಿಗಳು ದೃಢವಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದು 248 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಒಟ್ಟಾರೆ ಈವರೆಗೆ ಏರ್ ಪೋರ್ಟ್‍ನಲ್ಲಿ 1,46,979 ತಪಾಸಣೆ ಮಾಡಿದ್ದಾರೆ.Sign in to your account
Username or Email Address


Password

 Remember Me


