ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಂಬನಿ ಮಿಡಿದಿದ್ದಾರೆ.ಇಂದು ಹೃದಯಾಘತದಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರು ಸಾವನ್ನಪ್ಪಿದ್ದಾರೆ. ಈ ಸುದ್ದಿ ಇಡೀ ಚಂದನವನಕ್ಕೆ ಸಿಡಿಲು ಬಡಿದಂತೆ ಆಗಿದೆ. 25ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿ ಮುಂದೆ ಒಳ್ಳೆಯ ಸಿನಿಮಾ ಮಾಡಬೇಕು ಎಂದು ಕನಸು ಕಂಡಿದ್ದ ಚಿರು ಸಾವಿಗೆ ಹಲವಾರು ನಟರು ಸಂತಾಪ ಸೂಚಿಸಿದ್ದಾರೆ.ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನ ಹಾಗು ಸರ್ಜಾ ಕುಟುಂಬದವರಿಗೆ ನೀಡಲಿ. May the soul R.I.P pic.twitter.com/irCJomgSFE— Darshan Thoogudeepa (@dasadarshan) June 7, 2020ಈಗ ಚಿರು ಅವರ ಸಾವಿನ ವಿಚಾರವಾಗಿ ಟ್ವೀಟ್ ಮಾಡಿರು ದರ್ಶನ್ ಅವರು, ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಬರೆದುಕೊಂಡು ಚಿರಂಜೀವು ಸರ್ಜಾ ಅವರ ಫೋಟೋವನ್ನು ಕಮೆಂಟ್ ಮಾಡಿದ್ದಾರೆ.Shocking to know @chirusarja is no more. RIP— Puneeth Rajkumar (@PuneethRajkumar) June 7, 2020ಚಿರಂಜೀವಿ ಸರ್ಜಾ ಇನ್ನಿಲ್ಲ ಎಂದು ಕೇಳಿ ಶಾಕ್ ಆದೇ, ರೆಸ್ಟ್ ಇನ್ ಪೀಸ್ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಈ ಜೊತೆಗೆ ನಟಿ ಅಮೂಲ್ಯ ಅವರು ಟ್ವೀಟ್ ಮಾಡಿ, ನನಗೆ ನೀವು ಇಲ್ಲ ಎಂಬುದನ್ನು ನಂಬಲು ಆಗುತ್ತಿಲ್ಲ ಚಿರು ಸರ್, ನಿಮ್ಮ ಆತ್ಮಕ್ಕೆ ದೇವರು ಶಾಂತಿ ಕೊಡಲಿ. ನಿಮ್ಮ ಕುಟುಂಬಕ್ಕೆ ನಿಮ್ಮ ಸಾವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಹೇಳಿದ್ದಾರೆ.Just can't believe you are no more … May your wonderful soul rest in peace always chiru sir …Hope God gives strength to his family and meghana to bear this irreplaceable loss ???? pic.twitter.com/imDpCJoDGD— Amulya (@nimmaamulya) June 7, 2020ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ತಮ್ಮ 39ನೇ ವರ್ಷಕ್ಕೆ ಬಾರದ ಲೋಕಕ್ಕೆ ತೆರೆಳಿದ್ದಾರೆ.Sign in to your account
Username or Email Address


Password

 Remember Me


