ಗದಗ: ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ನಗರದ ಕಣ್ಯಾಳ ಅಗಸಿ ನಿವಾಸಿ ರಾಘವೇಂದ್ರ ಗೋಕಾಕ್ (34) ಆತ್ಮಹತ್ಯೆಗೆ ಶರಣಾದ ರೋಗಿ. ರಾಘವೇಂದ್ರ ಅನೇಕ ವರ್ಷಗಳಿಂದ ಲಿವರ್ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಹತ್ತಾರು ದಿನಗಳಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.ಮಾನಸಿಕ ಅಸ್ವಸ್ಥ ಎಂದುಕೊಂಡು ರಾಘವೇಂದ್ರ ಅವರಿಗೆ ಆಸ್ಪತ್ರೆಯ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿರಲಿಲ್ಲ. ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೊರೊನಾ ಬಂದಾಗಿನಿಂದ ಜಿಮ್ಸ್ ಸಿಬ್ಬಂದಿ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಇದರಿಂದ ಸಾಕಷ್ಟು ರೋಗಿಗಳು ಪರದಾಡುವ ಪರಸ್ಥಿತಿ ಎದುರಾಗಿ ಎಂಬ ರಾಘವೇಂದ್ರ ಸಂಬಂಧಿಕರು ಆರೋಪಿದ್ದಾರೆ.ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಗದಗ ಗ್ರಾಮೀಣ ಠಾಣೆ ಪಿಎಸ್‍ಐ ಮಲ್ಲಿಕಾರ್ಜುನ ಕುಲಕರ್ಣಿ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಟಾಫ್ ನರ್ಸ್ ಹಾಗೂ ಡ್ಯೂಟಿ ಡಾಕ್ಟರ್ ಗಳನ್ನ ವಿಚಾರಣೆಗೆ ಒಳಪಡಿಸಿದ್ದಾರೆ.Sign in to your account
Username or Email Address


Password

 Remember Me


