ಮಂಡ್ಯ: ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ.ನರಸಿಪುರ ತಾಲೂಕಿನ ಮಲಿಯೂರು ಗ್ರಾಮದ ಮಹೇಶ್ (30) ಹಾಗೂ ಮಾದೇಶ್ (23) ಮೃತ ದುರ್ದೈವಿಗಳು. ಮೃತರಿಬ್ಬರು ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಮಹೇಶ್ ಮತ್ತು ಮಾದೇಶ್ ಶುಕ್ರವಾರ ತಡರಾತ್ರಿ ಬೆಂಗಳೂರಿನಿಂದ ಕೆಲಸ ಮುಗಿಸಿ ಊರಿಗೆ ಬರುತ್ತಿದ್ದರು. ಆದರೆ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಅಪಘಾತದ ನಂತರ ಅಪರಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಸ್ಪತ್ರೆ ರವಾನಿಸಿದ್ದಾರೆ. ಈ ಕುರಿತು ಮಳವಳ್ಳಿ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


