ಬೆಂಗಳೂರು: ಟ್ರಾವೆಲ್ ಹಿಸ್ಟರಿ ಇಲ್ಲದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆ ಜನ ಆತಂಕಗೊಂಡಿದ್ದಾರೆ.ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಸಿದ್ದನಹೊಸಹಳ್ಳಿಯ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 26, 28, 29 ವರ್ಷದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಖಾಸಗಿ ಆಸ್ಪತ್ರೆಯಲ್ಲಿ ಶಂಕೆ ವ್ಯಕ್ತವಾಗಿದೆ.ಮೂವರು ಯುವಕರನ್ನು ಹೆಚ್ಚಿನ ಪರೀಕ್ಷೆಗಾಗಿ ನಗರದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರು ಯುವಕರನ್ನು ಕ್ವಾರಂಟೈನ್ ಮಾಡಲಾಗಿದೆ. ಅನ್‍ಲೋಡ್ ಮಾಡಲು ಬಂದ ಮುಂಬೈ ಮೂಲದ ಲಾರಿ ಚಾಲಕರಿಂದ ಕೊರೊನಾ ವೈರಸ್ ಹರಡಿರುವ ಶಂಕೆ ವ್ಯಕ್ತವಾಗಿದೆ. ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವರದಿಗಾಗಿ ವೈದ್ಯಾಧಿಕಾರಿಗಳು ಕಾಯುತ್ತಿದ್ದಾರೆ. ಸದ್ಯ ಗೋದಾಮಿನ ಮುಂದೆ ಮಾದನಾಯಕನಹಳ್ಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಸೀಲ್‍ಡೌನ್ ಮಾಡಿದ್ದಾರೆ.Sign in to your account
Username or Email Address


Password

 Remember Me


