ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಾಹುಲಿ ಇದ್ದಂತೆ. ಹೀಗಾಗಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ, ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಕೊಡಗಿನ ಜಂಬೂರಿನಲ್ಲಿ 2018ರ ಪ್ರವಾಹ ಸಂತ್ರಸ್ತರಿಗೆ ಮನೆ ಹಸ್ತಾಂತರ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದಾರೆ. ಮುಂದಿನ ಮೂರು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಅವರು ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಹಾಗೂ ಇದೀಗ ಕೋವಿಡ್-19 ವೈರಸ್ ಆಗಿರುವ ಸಂದರ್ಭದಲ್ಲಿ ಸಮರ್ಥವಾಗಿ ಎಲ್ಲವನ್ನೂ ನಿಭಾಯಿಸಿದ್ದಾರೆ. ಹೀಗಾಗಿ ಮುಂದೆಯೂ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದರು.ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಇಬ್ಬರು ಸಿಎಂಗಳಿದ್ದರು ಎನಿಸುತ್ತದೆ. ಇಲ್ಲದೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಆಡಳಿತಗಳು ಇದ್ದವು ಎನಿಸುತ್ತದೆ. ಆದರೆ ಬಿ.ಎಸ್.ಯಡಿಯೂರಪ್ಪ ಅವರು ಸಮರ್ಥರಿದ್ದಾರೆ. ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು. ಅವರಿಗೆ ಯಾರ ಸಲಹೆಗಳು ಬೇಕಾಗಿಲ್ಲ ಎಂದು ತಿರುಗೇಟು ನೀಡಿದರು.Sign in to your account
Username or Email Address


Password

 Remember Me


