ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ) ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಿಎನ್‌ಬಿ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸಿಬ್ಬಂದಿಯ ರಿಪೋರ್ಟ್ ಪಾಸಿಟಿವ್ ಬಂದ ಹಿನ್ನೆಲೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಬ್ಯಾಂಕ್‍ಗೆ ದೌಡಾಯಿಸಿ ಬ್ಯಾಂಕ್ ಅನ್ನು ಸೀಲ್‍ಡೌನ್ ಮಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವುಸೋಂಕಿತ ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಜೊತೆಗೆ ಬ್ಯಾಂಕ್‍ನ ಮುಂಭಾಗದಲ್ಲಿ ನೋಟಿಸ್ ಹಾಕಿದ್ದಾರೆ. ಆದರೆ ಸೆಕ್ಯೂರಿಟಿ ಗಾರ್ಡ್ ಸಮೇತ ಯಾರು ಕೂಡ ಬ್ಯಾಂಕ್‍ನಲ್ಲಿ ಇಲ್ಲ. ಹೀಗಾಗಿ ಬ್ಯಾಂಕ್ ಕ್ಲೋಸ್ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಾಹಿತಿಗಾಗಿ ತಡಕಾಡುತ್ತಿದ್ದಾರೆ.Sign in to your account
Username or Email Address


Password

 Remember Me


