ಗದಗ: ಕೊರೊನಾಗೆ ಜಿಲ್ಲೆಯಲ್ಲಿ 2ನೇ ಬಲಿಯಾಗಿಯಾಗಿದ್ದು, ತಾಲೂಕಿನ ಲಕ್ಕುಂಡಿ ಗ್ರಾಮದ 44 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಧುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಮೇ 27 ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ತೀವ್ರ ಜ್ವರ, ಉಸಿರಾಟದ ತೊಂದರೆ ಕಾಣಿಸಿಕೊಂಡ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಜೂನ್ 1ರಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಚಿಕಿತ್ಸೆ ಫಲಿಸದೆ ಸೋಂಕಿನಿಂದ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರ ಅಂತ್ಯ ಸಂಸ್ಕಾರವು ಕೋವಿಡ್-19 ವಿಪತ್ತು ನಿರ್ವಹಣೆ ಮಾರ್ಗ ಸೂಚಿ ಅನ್ವಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.ಮೃತ ವ್ಯಕ್ತಿಯ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದ್ದು, ಕುಟುಂಬ ವಾಸವಿದ್ದ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದೆ. ವ್ಯಕ್ತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಲಕ್ಕುಂಡಿ ಗ್ರಾಮದ ಜನರು ಸ್ವಯಂ ಪ್ರೇರಣೆಯಿಂದ ತಮ್ಮ ಕಾಲೋನಿಗಳಿಗೆ ಮುಳ್ಳಿನ ಬೇಲಿಹಾಕುವ ಮೂಲಕ ಶೀಲ್‍ಡೌನ್ ಮಾಡಿಕೊಳ್ಳುತ್ತಿದ್ದಾರೆ.Sign in to your account
Username or Email Address


Password

 Remember Me


