ರಾಯಚೂರು: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಕಷ್ಟದಲ್ಲಿದ್ದ ರಾಯಚೂರಿನ ಸಂಗೀತ ಕಲಾವಿದನಿಗೆ ಸಹಾಯ ಮಾಡಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಯಚೂರಿನ ತತ್ವಪದ ಗಾಯಕ ದಾದಪೀರ್ ಮಂಜರ್ಲಾಗೆ ಅಗತ್ಯ ವಸ್ತುಗಳ ಕಿಟ್ ನೀಡಿ ಸಹಾಯ ಹಸ್ತ ಚಾಚಿದ್ದಾರೆ. ಈ ಹಿಂದೆ ಕಲಾವಿನೊಂದಿಗೆ ಸಂಪರ್ಕದಲ್ಲಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಕಲಾವಿದ ದಾದಪೀರ್ ಕಷ್ಟದಲ್ಲಿದ್ದಾರೆ ಎಂದು ತಿಳಿದು ತಾವೇ ಕಿಟ್ ಕಳುಹಿಸಿಕೊಟ್ಟಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ದಾದಾಪೀರ್ ಮಂಜರ್ಲಾಗೆ ಸ್ಥಳೀಯ ಕಲಾವಿದರು, ಅಭಿಮಾನಿಗಳು ಧನಸಹಾಯ ಮಾಡಿ ಚಿಕಿತ್ಸೆಗೆ ಸಹಕಾರಿಯಾಗಿದ್ದಾರೆ. ಈಗ ಸಂಪೂರ್ಣ ಗುಣಮುಖರಾಗಿರುವ ದಾದಾಪೀರ್ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಿದ್ದಾರೆ.Sign in to your account
Username or Email Address


Password

 Remember Me


