ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ.ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 100 ಹೊಸ ಪ್ರಕರಣ ಬಂದಿದ್ದು ಸೋಂಕಿತರ ಸಂಖ್ಯೆ 405ಕ್ಕೆ ತಲುಪಿದೆ.ಇಂದು ಉಡುಪಿಯಲ್ಲಿ ಬಂದ ಎಲ್ಲ 150 ಮತ್ತು ಕಲಬುರಗಿಯ 100 ಪ್ರಕರಣಗಳಿಗೆ ಮಹಾರಾಷ್ಟ್ರ ಸಂಪರ್ಕವಿದೆ. ಇಂದು ಒಟ್ಟು 75 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕಂಡುಬಂದ ಒಟ್ಟು 388 ಸೋಂಕಿತರ ಪೈಕಿ 367 ಸೋಂಕಿತರು ಅಂತರಾಜ್ಯ ಪ್ರಯಾಣಿಕರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾಗೆ ಯಾರೂ ಬಲಿಯಾಗಿಲ್ಲ. ಒಟ್ಟು 2,339 ಸಕ್ರೀಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಒಟ್ಟು 1403 ಮಂದಿ ಬಿಡುಗಡೆಯಾಗಿದ್ದಾರೆ.ಯಾವ ಜಿಲ್ಲೆಯಲ್ಲಿ ಎಷ್ಟು?
ಉಡುಪಿ 150, ಕಲಬುರಗಿ 100, ಬೆಂಗಳೂರು ನಗರ 12, ಯಾದಗಿರಿ 5, ಮಂಡ್ಯ 4, ರಾಯಚೂರು 16, ಬೆಳಗಾವಿ 51, ಹಾಸನ 9, ಬೀದರ್ 10, ದಾವಣಗೆರೆ 7, ಚಿಕ್ಕಬಳ್ಳಾಪುರ 2, ವಿಜಯಪುರ 4, ಬಾಗಲಕೋಟೆ 9, ಧಾರವಾಡ 2, ಕೋಲಾರ 1, ಬೆಂಗಳೂರು ಗ್ರಾಮಾಂತರ 3, ಹಾವೇರಿ 1 ಪ್ರಕರಗಳು ಬಂದಿದೆ.ದಕ್ಷಿಣ ಕನ್ನಡ, ಮೈಸೂರು, ಉತ್ತರ ಕನ್ನಡ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ , ಗದಗ, ಚಿಕ್ಕಮಗಳೂರು, ಕೊಪ್ಪಳ, ಕೊಡಗು, ರಾಮನಗರದಲ್ಲಿ ಇಂದು ಯಾವುದೇ ಪಾಸಿಟಿವ್ ವರದಿಯಾಗಿಲ್ಲ.ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಬಿಡುಗಡೆ?
ಮಂಡ್ಯ 20, ಧಾರವಾಡ 15, ಬಳ್ಳಾರಿ 11, ಬೆಳಗಾವಿ 9, ಉತ್ತರ ಕನ್ನಡ 5, ತುಮಕೂರು 5, ಕೋಲಾರ 4, ಹಾವೇರಿ 3, ವಿಜಯಪುರದಲ್ಲಿ 3 ಮಂದಿ ಬಿಡುಗಡೆಯಾಗಿದ್ದಾರೆ.Sign in to your account
Username or Email Address


Password

 Remember Me


