ಮೈಸೂರು: ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿರುವ ಆಶ್ಚರ್ಯಕರ ಸುದ್ದಿ ಬೆಳಕಿಗೆ ಬಂದಿದೆ.ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಗುಂಡುಗಳು ಹೇಗೆ ನಾಪತ್ತೆಯಾಗಿವೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ರೈಟರ್ ಕೃಷ್ಣೇಗೌಡ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಈ ಕುರಿತು ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಘಟನೆಗೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಲವ ಹಾಗೂ ರೈಟರ್ ಕೃಷ್ಣೇಗೌಡ ವಿಚಾರಣೆ ನಡೆಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


