ಹಾವೇರಿ: ಹಾವೇರಿ ಜಿಲ್ಲೆಯ ಕೆಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ರೈತ ಮಹಿಳೆಯೊಬ್ಬರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸನಿಡನೇಗಿಲು ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತಪಟ್ಟ ರೈತ ಮಹಿಳೆಯನ್ನು ಮಲ್ಲವ್ವ ನಾಯ್ಕರ (55) ಎಂದು ಗುರುತಿಸಲಾಗಿದೆ. ಮೆಕ್ಕೆಜೋಳ ಬಿತ್ತನೆ ಮಾಡಲು ಜಮೀನಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಜಿಲ್ಲೆಯ ಕೆಲವೆಡೆ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನ ತ್ತತರಿಸಿ ಹೋಗಿದ್ದಾರೆ. ಹಿರೇಕೆರೂರು ಪಟ್ಟಣದಲ್ಲಿ ಸಹ ಬಿರುಗಾಳಿ ಸಹಿತ ಮಳೆಗೆ ಸರಕಾರಿ ಶಾಲೆಯ ಮೇಲ್ಛಾವಣಿ ಹಾರಿ ಹೋಗಿದೆ. ಬಿರುಗಾಳಿ ಮಳೆಗೆ ಜಿಲ್ಲೆಯ ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದ್ದು, ಆತಂಕದಲ್ಲೇ ಜನ ಬದುಕು ದೂಡುತ್ತಿದ್ದಾರೆ.Sign in to your account
Username or Email Address


Password

 Remember Me


