ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಉಗುಳುವುದು ಕಾನೂನು ರೀತಿ ಅಪರಾಧವಾಗಿದೆ. ಒಂದು ವೇಳೆ ಉಗುಳಿದ್ದು ಕಂಡು ಬಂದರೆ ಅಂತವರಿಗೆ ದಂಡದ ಜೊತೆ ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ಸರ್ಕಾರ ಆದೇಶಿಸಿದೆ.ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಶ್ರೀರಾಮುಲು, ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಇಂದಿನಿಂದಲೇ ನಿಷೇಧವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಐಪಿಸಿ ಸೆಕ್ಷನ್ 188, 268, 269, 270 ರ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.ಪ್ರತೀ ವರ್ಷ ಮೇ 31 ವಿಶ್ವ ತಂಬಾಕು ರಹಿತ ದಿನಾಚರಣೆಯಾಗಿರುತ್ತದೆ. ಈ ದಿನವಾದ ಇಂದು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವರು ಘೋಷಣೆ ಮಾಡಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


