ಬೆಂಗಳೂರು: ಇಂದು 141 ಮಂದಿಗೆ ಕೊರೊನಾ ತಗುಲಿದಿದ, ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 32 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 47 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.ಇಂದು ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 33, ಕಲಬುರಗಿ 2, ಯಾದಗಿರಿ 18, ಉಡುಪಿ 13, ಬೆಳಗಾವಿ 1, ದಾವಣಗೆರೆ 4, ಹಾಸನ 13, ಬೀದರ್ 10, ದಕ್ಷಿಣ ಕನ್ನಡ 14, ವಿಜಯಪುರ 11, ಮೈಸೂರು 2, ಧಾರವಾಡ 2, ಉತ್ತರ ಕನ್ನಡ 2, ಶಿವಮೊಗ್ಗ 6, ಚಿತ್ರದುರ್ಗ 1, ತಮಕೂರು 1, ಬೆಂಗಳೂರು ಗ್ರಾಮಾಂತರ 1, ಹಾವೇರಿ 4 ಮಂದಿಗೆ ಕೊರೊನಾ ದೃಢಪಟ್ಟಿದೆ.ಬೀದರ್ ಜಿಲ್ಲೆಯ 47 ವರ್ಷದ ಮಹಿಳೆ (ರೋಗಿ 2783) ಇಂದು ನಿಧನ ಹೊಂದಿದ್ದಾರೆ. ಮಹಿಳೆಯಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಮೇ 28ರಂದು ಬೀದರ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು 103 ಮಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.Sign in to your account
Username or Email Address


Password

 Remember Me


