ಧಾರವಾಡ: ಬಿಜೆಪಿ ಸರ್ಕಾರ ಬಂದ ಮೇಲೆ ಪ್ರವಾಹ ಆಯ್ತು, ಈಗ ಕೊರೊನಾ ಬಂದಿದೆ. ಈ ಹಿನ್ನೆಲೆ ಸಿಎಂ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಶಾಸಕರು ಫಂಡ್ ಹೆಚ್ಚು-ಕಡಿಮೆಯಾಗಿವೆ ಎಂದು ಹೇಳಿದ್ದಾರೆ, ಪಕ್ಷದ ಸಭೆಯಲ್ಲಿ ಅದನ್ನು ಸರಿ ಮಾಡ್ತಾರೆ ಎಂದು ಧಾರವಾಡ ಶಾಸಕ ಅರವಿಂದ್ ಬೆಲ್ಲದ ಹೇಳಿದರು.ನಗರದಲ್ಲಿ ಮಾತನಾಡಿದ ಅವರು, ಶಾಸಕರಾದವರಿಗೆಲ್ಲರಿಗೂ ಸಚಿವರಾಗುವ ಆಸೆ ಇದ್ದೇ ಇರುತ್ತದೆ. ಎಲ್ಲ ಪಕ್ಷದ ಸಿಎಂ ಇದ್ದಾಗಲೂ ಅದು ಇದ್ದದ್ದೆ. ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಇದನ್ನು ಬಗೆಹರಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.ಬೆಳಗಾವಿಯಲ್ಲಿ ಬಿಜೆಪಿ ಶಾಸಕರ ಪ್ರಾಬಲ್ಯ ಇದೆ ಎಂದು ಒಪ್ಪಿಕೊಂಡ ಶಾಸಕ ಬೆಲ್ಲದ, ಬೆಳಗಾವಿ ದೊಡ್ಡ ಜಿಲ್ಲೆ, ರಾಜ್ಯದಲ್ಲೇ ಅತಿ ಹೆಚ್ಚು ಬಿಜೆಪಿ ಶಾಸಕರಿರುವ ಜಿಲ್ಲೆ. ಹೀಗಾಗಿ ಅಲ್ಲಿ ನ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ ಎಂದು ಅಭಿಪ್ರಾಯಪಟ್ಟರು.Sign in to your account
Username or Email Address


Password

 Remember Me


