ಹಾಸನ: ಜಿಲ್ಲೆಯಲ್ಲಿ ಇಂದು ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ 4 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆಯಾಗಿದ್ದು, 115 ಆ್ಯಕ್ಟಿವ್ ಪ್ರಕರಣಗಳಿವೆ.ಜಿಲ್ಲೆಯಲ್ಲಿ ಇದುವರೆಗೂ ಕೊರೊನಾದಿಂದ 29 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇಂದು ವರದಿಯಾದ ನಾಲ್ಕು ಪ್ರಕರಣಗಳಲ್ಲಿ ಎಲ್ಲರೂ ಆಲೂರು ತಾಲ್ಲೂಕಿಗೆ ಸೇರಿದವರಾಗಿದ್ದಾರೆ. ಇವರಲ್ಲಿ ಒಬ್ಬರು ಪೊಲೀಸ್ ಪೇದೆಯಾಗಿದ್ದು, ಬೆಳಗಾವಿಯ ನಿಪ್ಪಾಣಿಯಲ್ಲಿ ಸೇವೆ ಸಲ್ಲಿಸಿ ಹಾಸನಕ್ಕೆ ವಾಪಸಾಗಿದ್ದರು. ಬಳಿಕ ಕೊರೊನಾ ಪಾಸಿಟಿವ್ ವರದಿ ಬಂದು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಜೊತೆಗೆ ಸಂಪರ್ಕ ಹೊಂದಿದ ಕಾರಣದಿಂದ ಇವರಿಗೂ ಸೋಂಕು ಹರಡಿದೆ.ಇನ್ನೊಂದು ಪ್ರಕರಣದಲ್ಲಿ ಮಂಬೈನಿಂದ ಆಗಮಿಸಿದ್ದ ದಂಪತಿಗೆ ಪಾಸಿಟಿವ್ ಬಂದಿತ್ತು. ಮೊದಲ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದ ಮಗುವಿಗೆ 2ನೇ ಟೆಸ್ಟ್ ನಲ್ಲಿ ಪಾಸಿಟಿವ್ ವರದಿ ಬಂದಿದೆ. ಸದ್ಯ ಮಗುವನ್ನು ಆರೈಕೆ ಮಾಡಿದ ಅಜ್ಜಿ, ಮಾವನಿಗೂ ಸೋಂಕು ತಗುಲಿದೆ. ಇದೀಗ ಸೋಂಕಿತರು ವಾಸವಿದ್ದ ಹಳ್ಳಿ, ಪೊಲೀಸ್ ಕ್ವಾಟ್ರಸ್ ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆ ಸೀಲ್‍ಡೌನ್ ಮಾಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಸೋಂಕಿತರೆಲ್ಲರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


