ಮಂಡ್ಯ: ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ.ಆಶಾ ಕಾರ್ಯಕರ್ತೆ ಕೆ.ವೈ ಶೋಭಾ ಅವರ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಅದೇ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.ಹಲ್ಲೆ ಆರೋಪ ಎದುರಿಸುತ್ತಿರುವ ನಾಲ್ವರು ಕ್ವಾರಂಟೈನ್ ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಶೋಭಾ ತಿಳುವಳಿಕೆ ನೀಡಲು ಹೋಗಿದ್ದಾರೆ. ಅಷ್ಟಕ್ಕೆ ಕೋಪಗೊಂಡ ನಾಲ್ವರು ನಿನ್ನದು ಅತಿಯಾಯ್ತು. ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದೀಯಾ, ಮಾನಸಿಕ ಹಿಂಸೆ, ಕಿರುಕುಳ ನೀಡ್ತಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದಲ್ಲದೇ ಹಲ್ಲೆ ಮಾಡಿದ್ದಾರೆ.ಹಲ್ಲೆಗೊಳಗಾದ ಶೋಭಾಗೆ ಕೆ.ಆರ್ ಪೇಟೆ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕೆ.ಆರ್ ಪೇಟೆ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.






 Advertisement 




Sign in to your account
Username or Email Address


Password

 Remember Me


