ಚಿಕ್ಕಮಗಳೂರು: ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾತ, ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೀರೂರು ಬಳಿ ನಡೆದಿದೆ.ಬೀರೂರು ಸಮೀಪದ ಬಳಿಗನೂರು ಗ್ರಾಮದ ಮಲ್ಲಪ್ಪ (57) ಹಾಗೂ ಉತ್ಸವ್ (12) ಮೃತ ದುರ್ದೈವಿಗಳು. ಕಡೂರು-ಬೀರೂರು ಮಧ್ಯದ ಪರ್ಲ್ಸ್ ಕ್ಲಬ್ ಸಮೀಪದ ರಂಗನಾಥ್ ಶೋಂ ರೂಂ ಬಳಿ ಈ ಅಪಘಾತ ಸಂಭವಿಸಿದೆ.ಬೀರೂರಿನಿಂದ ಕಡೂರು ಕಡೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಡೂರಿನಿಂದ ಬೀರೂರು ಕಡೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ವೇಗವಾಗಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆಯ ಬದಿಯ ಮರಕ್ಕೆ ಟಿಪ್ಪರ್ ಅದೇ ವೇಗದಲ್ಲಿ ಅಪ್ಪಳಿಸಿದೆ.ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


