ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ.ಮೇ 25ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ ಟೇಕಾಫ್ ಆಗಲಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 10.20ಕ್ಕೆ, ರಾತ್ರಿ 9.35 ಹಾಗೂ ಇಂಡಿಗೋ ಸಂಜೆ 7.30ಕ್ಕೆ ಸಂಚರಿಸಲಿದೆ.ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 7.05ಕ್ಕೆ, ಇಂಡಿಗೋ ಬೆಳಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ. ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 9.05ಕ್ಕೆ, ಇಂಡಿಗೋ 11.40 ಕ್ಕೆ ತೆರಳಲಿದೆ.ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ ಎಂದು ಇಂಡಿಗೋ ಮತ್ತು ಸ್ಪೈಸ್ ಜೆಟ್ ಪ್ರಕಟಣೆ ತಿಳಿಸಿದೆ.Sign in to your account
Username or Email Address


Password

 Remember Me


