ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಸಹ ಮಹಾರಾಷ್ಟ್ರದಿಂದ ಆಗಮಿಸಿರುವ 20 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.ಶುಕ್ರವಾರ 47 ಮಂದಿಗೆ ಸೋಂಕು ದೃಢವಾಗಿತ್ತು. ಇಂದು 20 ಮಂದಿಗೆ ಕೊರೊನಾ ಬಂದಿದ್ದು, ಸದ್ಯ ಹಳೆಯ 26 ಸೇರಿದಂತೆ ಒಟ್ಟು 93 ಪ್ರಕರಣಗಳಾಗಿವೆ. ಶತಕದ ಸನಿಹ ಚಿಕ್ಕಬಳ್ಳಾಪುರ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್, ಮಹಾರಾಷ್ಟ್ರದಿಂದ ಜಿಲ್ಲೆಗೆ ವಲಸಿಗರ ಆಗಮನಕ್ಕೆ ನಾನು ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಮಾನವೀಯತೆ ದೃಷ್ಟಿಯಿಂದ 07-08 ಬಸ್ ಗಳ ಮೂಲಕ 275 ಮಂದಿ ಜಿಲ್ಲೆಗೆ ಆಗಮಿಸಿದರು. ಈಗ ಅವರಲ್ಲಿ ಸೋಂಕು ಹೆಚ್ಚಾಗಿದೆ ಎಂದರು.ಇನ್ನೂ 163 ಮಂದಿಯ ವರದಿ ಬರಬೇಕಿದೆ. ಹೀಗಾಗಿ ಈ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 100 ರಿಂದ 125 ಆದರೂ ಆಶ್ಚರ್ಯವಿಲ್ಲ ಅಂತ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುತ್ತೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಸಂಜೆಯ ವರದಿಯಲ್ಲೂ ಸಹ ಮತ್ತಷ್ಟು ಪ್ರಕರಣಗಳು ವರದಿಯಾಗುವ ಸಾಧ್ಯತೆಯಿದೆ. Sign in to your account
Username or Email Address


Password

 Remember Me


