ಧಾರವಾಡ: ಸರ್ಕಾರಕ್ಕೆ ಮಹಿಳೆಯರು ಹಣ ಕಳುಹಿಸುವ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.ನಗರದ ಮುರುಘಾಮಠ ಆವರಣದ ಅಂಚೆ ಕಚೇರಿ ಎದುರು ಪ್ರತಿಭಟನೆ ಮಾಡಿದ ಮಹಿಳೆಯರು, ಮನಿ ಆರ್ಡರ್ ಮೂಲಕ ಸರ್ಕಾರಕ್ಕೆ ಹಣ ಕಳುಹಿಸಿ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ.ಈ ಮೊದಲು ಮಹಿಳೆಯರು ಮನಿ ಆರ್ಡರ್ ಅಭಿಯಾನ ಮಾಡಿದ್ದರು. ಈ ವೇಳೆ ನೂರಾರು ಮಹಿಳೆಯರಿಂದ 1,020ರೂಪಾಯಿ ಜಮೆಯಾಗಿತ್ತು. ಈ ಹಣವನ್ನು ಇದೀಗ ರಾಜ್ಯ ಸರ್ಕಾರಕ್ಕೆ ಮನಿ ಆರ್ಡರ್ ಮಾಡಿದ್ದಾರೆ. ನಂತರ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಖಜಾನೆಗೆ ನಾವು ದುಡಿದ ಹಣ ಕೊಡುತ್ತೇವೆ, ಆದರೆ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಪ್ರತಿಭಟನಾಕಾರ ಮಹಿಳೆಯರು ಆಗ್ರಹಿಸಿದರು.Sign in to your account
Username or Email Address


Password

 Remember Me


