ಹಾಸನ: ಪಿಜಿ ಬಾಡಿಗೆ ನೀಡಿಲ್ಲ ಎಂದು ಇಬ್ಬರು ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.ಹಾಸನದ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ ಮನೆಗೆ ತೆರಳಿದ್ದರು. ನಂತರ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಪಿಜಿಗೆ ಬಂದಿರಲಿಲ್ಲ.ಇಂದು ಬಟ್ಟೆ, ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬಾಡಿಗೆ ಕಾರು ಮಾಡಿಕೊಂಡು ಪಿಜಿಗೆ ಬಂದಿದ್ದಾರೆ. ಈ ವೇಳೆ ಎರಡು ತಿಂಗಳ ಬಾಡಿಗೆ ಹಣ ನೀಡಲೇಬೇಕು ಎಂದು ಪಿಜಿ ಮಾಲೀಕ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿಯರು ಹಣವಿಲ್ಲ ಎಂದು ತಮ್ಮ ಕಷ್ಟ ಹೇಳಿಕೊಂಡಿದ್ದು, ಅವರ ಮಾತಿಗೆ ಕ್ಯಾರೇ ಎನ್ನದ ಪಿಜಿ ಮಾಲೀಕ ಇಬ್ಬರನ್ನೂ ಪಿಜಿಯಲ್ಲೇ ಕೂಡಿ ಹಾಕಿದ್ದಾನೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಡಾವಣೆ ಪೊಲೀಸರು ಯುವತಿಯರಿಬ್ಬರನ್ನು ಬಿಡುಗಡೆಗೊಳಿಸಿ ವಿಚಾರಣೆ ನಡೆಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


