ಮಡಿಕೇರಿ: ತಾಯಿಯೊಂದಿಗೆ ಜಗಳವಾಡಿದ ಅಣ್ಣನನ್ನೇ ತಮ್ಮನೊಬ್ಬ ಗುಂಡಿಕ್ಕಿ ಕೊಲೆಗೈದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದದಲ್ಲಿ ಇಂದು ನಡೆದಿದೆ.ಬಿಳಗುಂದದ ಸುರೇಶ್ (48) ಹತ್ಯೆಯಾದ ವ್ಯಕ್ತಿ. ಕುಮಾರ್ ಕೊಲೆಗೈದ ಆರೋಪಿ. ಇಬ್ಬರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ಕುಮಾರ್ ಮದ್ಯದ ಮತ್ತಿನಲ್ಲಿ ಕೊಲೆಗೈದಿದ್ದಾನೆ ಎನ್ನಲಾಗಿದೆ.ಸುರೇಶ್ ಇಂದು ಕುಮಾರ್ ತಾಯಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದ. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಕುಮಾರ್ ಏಕಾಏಕಿ ಮನೆಯಿಂದ ಗನ್ ತಂದು ಸುರೇಶ್ ಎದೆಗೆ ಶೂಟ್ ಮಾಡಿದ್ದಾನೆ. ಪರಿಣಾಮ ಎದೆಗೆ ಹೊಕ್ಕು ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆದರೆ ಇದನ್ನು ತಿಳಿಯದೆ ವಿರಾಜಪೇಟೆ ಆಸ್ಪತ್ರೆಗೆ ಸುರೇಶ್ ಮೃತದೇಹವನ್ನು ಸಾಗಿಸಲಾಗಿತ್ತು.ಕ್ಷುಲ್ಲಕ ಕಾರಣಕ್ಕೆ ಗುಂಡು ಹಾರಿಸಿ ಹತ್ಯೆಗೈದಿದ್ದ ಪಾಪಿ ಕುಮಾರ್ ಘಟನಾ ಸ್ಥಳದಿಂದ ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ವಿರಾಜಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸುರೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲೇ ಇರಿಸಿ, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿರಾಜಪೇಟೆ ಪೊಲೀಸರು ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಸುರೇಶ್‍ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.Sign in to your account
Username or Email Address


Password

 Remember Me


