ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಲಾಕ್‍ಡೌನ್ ನಲ್ಲೂ ಬಡವರ ಪಡಿತರಕ್ಕೆ ಕನ್ನ ಬಿದ್ದಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ನಡೆಸಿದ್ದ ಲಾರಿಯನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಏಳು ಮೈಲ್ ಕ್ರಾಸ್ ಬಳಿ ಲಾರಿ ವಶಕ್ಕೆ ಪಡೆದು ಗ್ರಾಮೀಣ ಠಾಣಾ ಪೊಲೀಸರಿಗೆ ಒಪ್ಪಿಸಲಾಗಿದೆ.ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಕಡೆಗೆ ಲಾರಿಯಲ್ಲಿ 80 ಕ್ವಿಂಟಾಲ್ ಪಡಿತರ ಅಕ್ಕಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಚೀಲಗಳನ್ನ ಬದಲಾವಣೆ ಮಾಡಿ ಅಕ್ಕಿಯನ್ನು ಸಾಗಿಸುತ್ತಿದ್ದರು. ಅಧಿಕಾರಿಗಳ ದಾಳಿ ವೇಳೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಸದ್ಯಕ್ಕೆ ಲಾರಿ ಸೀಜ್ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಮೇಲ್ನೋಟಕ್ಕೆ ಪಡಿತರ ಅಕ್ಕಿ ಅನ್ನೋದು ಪಕ್ಕಾ ಆಗಿದ್ದು, ಪೊಲೀಸ್ ವಿಚಾರಣೆ ಬಳಿಕ ಆರೋಪಿಗಳ ಬಣ್ಣ ಬಯಲಾಗಲಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


