ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ವಾಪಸ್ ಬಂದ ಜಿಲ್ಲೆಯ 7 ಜನ ವಲಸಿಗರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಕೆ) ಗ್ರಾಮದ 22 ವರ್ಷದ ಯುವಕ, ಸುಂಬಡ ಗ್ರಾಮದ 35 ವರ್ಷದ ಪುರುಷ, 46 ವರ್ಷದ ಪುರುಷ, ಅರಳಗುಂಡಗಿಯ 25 ವರ್ಷದ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮದ 22 ವರ್ಷದ ಯುವತಿಗೂ ಕೋವಿಡ್-19 ದೃಢವಾಗಿದೆ. ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದ 26 ವರ್ಷದ ಯುವಕ ಮತ್ತು ಯಾಗಾಪುರದ 50 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.ಯಾಳವಾರ ಗ್ರಾಮದ ಯುವತಿ ಹೊರತುಪಡಿಸಿ ಉಳಿದ 6 ಜನ ಸರ್ಕಾರಿ ಕ್ವಾರಂಟೈನ್ ಸೆಂಟರ್ ನಲ್ಲಿದ್ದವರಾಗಿದ್ದು, ಸೋಂಕು ದೃಢವಾದ ನಂತರ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿ.ಸಿ ಶರತ್ ಬಿ ತಿಳಿಸಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 134ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 55 ಜನ ಗುಣಮುಖರಾಗಿದ್ದಾರೆ. ಉಳಿದಂತೆ 7 ಜನರು ನಿಧನಹೊಂದಿದ್ದು, 72 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ ಮಾಹಿತಿ ನೀಡಿದ್ದಾರೆ.Sign in to your account
Username or Email Address


Password

 Remember Me


