ಬೆಂಗಳೂರು: ಕೊರೊನಾ ವಿರುದ್ಧ ನಡೆಯುತ್ತಿದ್ದ ಯುದ್ಧದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಮಾಧ್ಯಮಗಳು ನಿರಂತರವಾಗಿ ದುಡಿಯುತ್ತಿದ್ದು, ಸದ್ಯ ಈ ಪಟ್ಟಿಗೆ ಸಾರಿಗೆ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇರ್ಪಡೆ ಮಾಡಿದೆ. ರಾಜ್ಯ ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು, ನಿರ್ವಾಹಕರು ಮೃತಪಟ್ಟರೆ ಕುಟುಂಬಸ್ಥರಿಗೆ 30 ಲಕ್ಷ ಪರಿಹಾರ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿ ಮಾಹಿತಿ ನೀಡಿದ್ದು, ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ ಕೋವಿಡ್-19 ಪಿಡುಗಿಗೆ ತುತ್ತಾಗಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಈ ಪರಿಹಾರವನ್ನು ಸಾರಿಗೆ ಇಲಾಖೆಯಿಂದ ನೀಡಲು ನಿರ್ಧರಿಸಲಾಗಿದೆ. ಮೇ 19 ರಿಂದ ಸಾರಿಗೆ ಸಂಸ್ಥೆಗಳ ಬಸ್ಸುಗಳು ಕಾರ್ಯನಿರ್ವಹಿಸಲಿದ್ದು, ಈ ಸಂದರ್ಭದಲ್ಲಿ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ಒದಗಿಸಲು ಕ್ರಮಕೈಗೊಳ್ಳಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಸಂಸ್ಥೆಗಳ ಎಲ್ಲಾ ಚಾಲಕರು, ನಿರ್ವಾಹಕರು ಮತ್ತು ಸಿಬ್ಬಂದಿಗಳು ಗಮನಹರಿಸುವ ಮೂಲಕ ಕೋವಿಡ್-19 ರೋಗವನ್ನು ತಡಗಟ್ಟಲು ಸಹಕರಿಸಬೇಕೆಂದು ಸಚಿವ ಲಕ್ಷ್ಮಣ ಸವದಿ ಅವರು ಮನವಿ ಮಾಡಿಕೊಂಡಿದ್ದಾರೆ.ಪ್ರಯಾಣಿಕರು ಕೂಡ ಬಸ್ಸುಗಳಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಈ ಮುಂತಾದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


