ಬೆಂಗಳೂರು: ಕೋವಿಡ್ 19ನಿಂದ ಮುಂದೂಡಿಕೆಯಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಜೂನ್ 25 ರಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದರೆ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಜೂನ್ 18ಕ್ಕೆ ನಡೆಯಲಿದೆ.ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಮುಖ್ಯಮಂತ್ರಿ ಯಡಿಯೂರಪ್ಪನವರು ಪರೀಕ್ಷೆ ನಡೆಸಲು ಅನುಮತಿ ನೀಡಿದ್ದಾರೆ. ಒಟ್ಟು 2,879 ಕೇಂದ್ರದಲ್ಲಿನ 43,720 ಕೊಠಡಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ಪ್ರಾರಂಭಕ್ಕೂ ಮುಂಚೆ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ತಿಳಿಸಿದರು.ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬೇಕೇ ಬೇಡವೇ ಎನ್ನುವ ಚರ್ಚೆ ಇಲಾಖೆಯಲ್ಲಿ ನಡೆದಿದೆ. ಆದರೆ ನೀಟ್ ಪರೀಕ್ಷೆ ಬರೆಯುವರಿಗೆ ಇಂಗ್ಲಿಷ್ ಪರೀಕ್ಷೆ ಅಗತ್ಯವಾಗಿರುವ ಕಾರಣ ಪರೀಕ್ಷೆ ನಡೆಸಲಾಗುತ್ತದೆ ಎಂದು ವಿವರಿಸಿದರು.ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಒಂದೊಂದು ದಿನ ಗ್ಯಾಪ್ ಕೊಡಲಾಗುತ್ತದೆ. ಒಟ್ಟು 10 ದಿನ ಪರೀಕ್ಷೆ ನಡೆಯುಲಿದೆ.ಕಂಟೈನ್ಮೆಂಟ್ ಝೋನ್ ನಲ್ಲಿ ಪರೀಕ್ಷೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಇಂದಿಗೆ 126 ಕಂಟೈನ್ಮೆಂಟ್ ವಲಯಗಳಿವೆ. ಕಂಟೈನ್ಮೆಂಟ್ ವಲಯದಲ್ಲಿ ಪರೀಕ್ಷೆ ಇಲ್ಲ. ಈ ವಲಯದಲ್ಲಿನ ಕೇಂದ್ರಗಳಿಗೆ ವರ್ಗಾವಣೆ ಮಾಡಿದ್ದೇವೆ. ಪರೀಕ್ಷೆ ಪ್ರಾರಂಭ ಮಾಡೋಕೆ ಮೂರು ದಿನ ಮೊದಲು ಕಂಟೈನ್ಮೆಂಟ್ ಝೋನ್ ಆದರು ಬೇರೆ ಕೇಂದ್ರಕ್ಕೆ ಶಿಫ್ಟ್ ಮಾಡ್ತೀವಿ. ಪರೀಕ್ಷೆ ಬರೆಯೋ ದಿನ ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾದ್ರೂ ಆ ಮಕ್ಕಳಿಗೆ ಬೇರೆ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


