ರಾಯಚೂರು: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.ತಾಲೂಕಿನ ಗುಂಜಹಳ್ಳಿ ಪ್ರೌಢಶಾಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿದ್ದಾನೆ. ಗುಂಜಹಳ್ಳಿ ಗ್ರಾಮದ ಬಾರಯ್ಯ (35) ಮೃತ ದುರ್ದೈವಿ. ಪ್ರೌಢಶಾಲೆ ಪಕ್ಕದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಾಮಗಾರಿ ನಡೆಯುತ್ತಿತ್ತು. ಇದಕ್ಕಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ವಿದ್ಯುತ್ ತಂತಿ ಸ್ಪರ್ಷದಿಂದ ಇದೀಗ ವ್ಯಕ್ತಿ ಸಾವನ್ನಪ್ಪಿದ್ದಾನೆ.ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೆಣಸಿಕಾಯಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕ ಹೋಗಿದ್ದ. ಆಂಧ್ರ ಪ್ರದೇಶದಿಂದ ಮರಳಿ ಬಂದಿದ್ದ ಕಾರ್ಮಿಕರನ್ನು ಶಾಲೆಯಲ್ಲಿ ಕೊರಂಟೈನ್ ಮಾಡಲಾಗಿತ್ತು. ಶನಿವಾರ ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿ ಕೆಳಗೆ ನೇತಾಡುತ್ತಿತ್ತು. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬಾರಯ್ಯ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್, ಎಸ್‍ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


