ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೂಡ್ಲುಗೇಟ್ ನ ಎಎಫ್‍ಸಿಎಲ್ ಲೇಔಟ್ ನಲ್ಲಿ ನಡೆದಿದೆ.ಮುನೀಶ್ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ. ಬಿಹಾರ ಮೂಲದವನಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಮನೆಯಲ್ಲಿ ಪತ್ನಿಯಿದ್ದರೂ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಬಗ್ಗೆ ಪತ್ನಿ ಪ್ರಶ್ನೆ ಮಾಡಿದ್ದಕ್ಕೆ ಆಕೆಯನ್ನು ಕೊಲೆಗೈದು, ತಾನು ಸಹ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅನೈತಿಕ ಸಂಬಂಧ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇಂದು ನಡೆದ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


