ಹಾಸನ: ಕ್ವಾರಂಟೈನ್‍ನಲ್ಲಿ  ಟಿಕ್‍ಟಾಕ್ ಮಾಡಿದವರಿಗೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಮುಂಬೈನಿಂದ ಬಂದು ಚನ್ನರಾಯಪಟ್ಟಣದ ಕ್ವಾರಂಟೈನ್ ಕೇಂದ್ರದಲ್ಲಿ ಇರುವವರು ನಿಯಮ ಪಾಲಿಸದೆ ಟಿಕ್‍ಟಾಕ್ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಗಮನಕ್ಕೆ ಬಂದಿದ್ದು, ಟಿಕ್‍ಟಾಕ್ ಮಾಡುತ್ತಿರುವವರಿಗೆ ನಿಯಮ ಪಾಲಿಸುವಂತೆ ಎಚ್ಚರಿಕೆ ಕೊಟ್ಟಿದ್ದಾರೆ.ಮುಂಬೈನಿಂದ ಹಾಸನಕ್ಕೆ ಬಂದ 12 ಜನರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಇದರಿಂದ ಹಾಸನ ಗ್ರೀನ್ ಜೋನ್ ಪಟ್ಟ ಕಳೆದುಕೊಂಡಂತಾಗಿದೆ. ಆದರೆ ಮುಂಬೈನಿಂದ ಬಂದ ಕೆಲವರು ಕ್ವಾರಂಟೈನ್ ಕೇಂದ್ರದಲ್ಲಿ ನಿಯಮ ಪಾಲಿಸದೆ ಟಿಕ್‍ಟಾಕ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.ಗಿರೀಶ್ ಕ್ವಾರಂಟೈನ್ ಕೇಂದ್ರದಲ್ಲಿ ಇರುವವರು ಈ ಬಗ್ಗೆ ತಿಳಿದುಕೊಂಡು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.Sign in to your account
Username or Email Address


Password

 Remember Me


